ಎರೆಯಂತೆ ಕರಕರಗಿ ಮಳಲಂತೆ ಜರಿಜರಿದು ಕನಸಿನಲ್ಲಿ ಕಳವಳಿಸಿ ಆನು ಬೆರಗಾದೆ. ಆವಿಗೆಯ ಕಿಚ್ಚಿನಂತೆ ಸುಳಿಸುಳಿದು ಬೆಂದೆ ಆಪತ್ತಿಗೆ ಸಖಿಯರನಾರನೂ ಕಾಣೆ. ಅರಸಿ ಕಾಣದ ತನುವ ಬೆರಸಿ ಕೂಡದ ಸುಖವ ಎನಗೆ ನೀ ಕರುಣಿಸಾ ಚೆನ್ನಮಲ್ಲಿಕಾರ್ಜುನಾ.