ಎಲವೋ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಲವೋ ಎಲವೋ ಪಾಪಕರ್ಮವ ಮಾಡಿದವನೇ
ಎಲವೋ ಎಲವೋ ಬ್ರಹ್ಮೇತಿಯ ಮಾಡಿದವನೇ
ಒಮ್ಮೆ ಶರಣೆನ್ನೆಲವೋ. ಒಮ್ಮೆ ಶರಣೆಂದಡೆ ಪಾಪಕರ್ಮ ಓಡುವವು. ಸರ್ವಪ್ರಾಯಶ್ಚಿತ್ತಕ್ಕೆ ಹೊನ್ನ ಪರ್ವತಂಗಳೈದವು. ಒಬ್ಬಗೆ ಶರಣೆನ್ನು
ನಮ್ಮ ಕೂಡಲಸಂಗಮದೇವಂಗೆ."https://kn.wikisource.org/w/index.php?title=ಎಲವೋ&oldid=80595" ಇಂದ ಪಡೆಯಲ್ಪಟ್ಟಿದೆ