ವಿಷಯಕ್ಕೆ ಹೋಗು

ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಎಲುವಿಲ್ಲದ ನಾಲಗೆ ಹೊದಕುಳಿಗೊಂಡಾಡುದು
ಎಲೆ ಕಾಲಂಗೆ ಗುರಿಯಾದ ಕರ್ಮಿ. ಉಲಿಯದಿರು
ಉಲಿಯದಿರು ಭವಭಾರಿ ನೀನು. ಹಲವು ಕಾಲದ ಹುಲುಮನುಜಂಗೆ ಹುಲುಮನುಜ ಹೆಂಡತಿ ಇವರಿದ್ದರೆ ಅದಕ್ಕದು ಸರಿ. ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ ಲೋಕದೊಳಗ್ಹೆಂಡಿರುಂಟಾದರೆ ಮಾಡಿಕೊ
ಎನ್ನ ಬಿಡು ಮರುಳೆ.