ಎಲೆಯಿಲ್ಲದ ವೃಕ್ಷ ಉಲಿಯಬಲ್ಲುದೆ ? ಜಲವಿಲ್ಲದ ತಟಾಕ ತೆರೆಗೊಡಲುಂಟೆ ? ಶಬ್ದಮುಗ್ಧವಾದವಂಗೆ ನುಡಿಗೆಡೆಯುಂಟೆ ? ಸಮಯವ ಸಾಧಿಸುವನ್ನಬರ ಎಂತು ನಿಜನಿಃಪತಿಯಪ್ಪುದು ? ಭ್ರಾಂತುಮರ್ಕಟನ ವೃಶ್ಚಿಕ ಹೊಯಿದಂತೆ ನಮ್ಮ ಗುಹೇಶ್ವರಲಿಂಗದಲ್ಲಿ ಮರೆದಾಡಬೇಡವೆಲೆ ಭ್ರಾಂತುಯೋಗಿ ಘಟ್ಟಿವಾಳಯ್ಯ.