ವಿಷಯಕ್ಕೆ ಹೋಗು

ಎಲೆ ಅಣ್ಣಾ ಅಣ್ಣಾ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಎಲೆ ಅಣ್ಣಾ ಅಣ್ಣಾ
ನೀವು ಮರುಳಲ್ಲಾ ಅಣ್ಣಾ
ಎನ್ನ ನಿನ್ನಳವೆ ? ಹದಿನಾಲ್ಕು ಲೋಕವ ನುಂಗಿದ ಕಾಮನ ಬಾಣದ ಗುಣ ಎನ್ನ ನಿನ್ನಳವೆ ? ವಾರುವ ಮುಗ್ಗಿದಡೆ
ಮಿಡಿಹರಿಯ ಹೊಯ್ವರೆ ? ಮುಗ್ಗಿದ ಭಂಗವ ಮುಂದೆ ರಣದಲ್ಲಿ ತಿಳಿವುದು. ನಿನ್ನ ನೀ ಸಂವರಿಸಿ ಕೈದುವ ಕೊಳ್ಳಿರಣ್ಣಾ
ಚೆನ್ನಮಲ್ಲಿಕಾರ್ಜುನನೆಂಬ ಹಗೆಗೆ ಬೆಂಗೊಡದಿರಣ್ಣಾ.