ಎಲೆ ಕಾರಣ ಶಿವನೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಲೆ ಶಿವನೆ
ನೀನು ಎನ್ನ ಮೆಚ್ಚಿ ಕೈವಿಡಿದ ಕಾರಣ ಎಮ್ಮವರು ಸಕಲಗಣಂಗಳ ಸಾಕ್ಷಿಯಮಾಡಿ ನಿನಗೆ ಎನ್ನ ಮದುವೆಯಮಾಡಿಕೊಟ್ಟರು. ನೀನು ಎನ್ನನಗಲಿದಡೆ ಗುರುದ್ರೋಹಿ. ಆನು ನಿನ್ನನಗಲಿದಡೆ ಸಮಯಕ್ಕೆ ಹೊರಗು. ಅದೆಂತೆಂದೊಡೆ : ಮುನ್ನ ಶ್ರೀಗುರುಸ್ವಾಮಿ ಎನ್ನ ಪ್ರಾಣದೊಳಗೆ ನಿನ್ನ ಪ್ರಾಣವ ಹುದುಗಿಸಿ
ನಿನ್ನ ಪ್ರಾಣದೊಳಗೆ ಎನ್ನ ಪ್ರಾಣವ ಹುದುಗಿಸಿ ಎಂದೆಂದೂ ಅಗಲಬೇಡೆಂದು ನಿರೂಪಿಸಿದನು. ಆ ನಿರೂಪವನು ಮಹಾಪ್ರಸಾದವೆಂದು ಕೈಕೊಂಡ ಬಳಿಕ ನಾವಿಬ್ಬರು ಎಂದೆಂದಿಗೂ ಅಗಲದಿರಬೇಕಯ್ಯಾ ಅಖಂಡೇಶ್ವರಾ.