ಎಲೆ ಮನವೆ; ನೀ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಲೆ ಮನವೆ; ನೀ ನಿನ್ನ ನಿಜವ ತಿಳಿವಡೆ ಆ ನಿನ್ನ ನಿಜವ ಹೇಳುವೆ ಕೇಳು: ಅದು ಕೇವಲ ಜ್ಯೋತಿ ಅದು ವರ್ಣಾತೀತ. ನೀನದನರಸುವಾಗ ನಿನಗಾವಲ್ಲಿ ನಿಶ್ಚಯ ತೋರಿತ್ತು
ಅದೀಗ ನಿನ್ನ ಪರಿಪೂರ್ಣತ್ವದ ನೆಲೆ. ಆ ನಿನ್ನ ನಿಜವ ನಿಶ್ಚಯಿಸಿ ನೀ ನಿರ್ಗಮನಿಯಾದಲ್ಲಿ ಅದೇ ನಿನ್ನ ಸಮ್ಯಕ್‍ಜ್ಞಾನದ ತೋರಿಕೆ ! ಆ ತೋರಿಕೆಯ ಅಖಂಡ ಬೆಳಗಿನ ಹೊಳಹಿನೊಳಗೆ ನೀ ನಮ್ಮ ಗುಹೇಶ್ವರಲಿಂಗದ ಶ್ರೀಚರಣವನರಸಿಕೊಂಡು ನಿಶ್ಚಿಂತನಾಗೆಲೆ ಮನವೆ.