ಎಲ್ಲರೂ ವೀರರು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಲ್ಲರೂ ವೀರರು
ಎಲ್ಲರೂ ದ್ಥೀರರು
ಎಲ್ಲರೂ ಮಹಿಮರು
ಎಲ್ಲರೂ ಪ್ರಮಥರು. ಕಾಳಗದ ಮುಖದಲ್ಲಿ ಕಾಣಬಾರದು
ಓಡುವ ಮುಖದಲ್ಲಿ ಕಾಣಬಹುದು. ನಮ್ಮ ಕೂಡಲಸಂಗನ ಶರಣರು ದ್ಥೀರರು
ಉಳಿದವರೆಲ್ಲರೂ ಅಧೀರರು.