ಎಲ್ಲಿಕ್ಕೆಯ ಎಣ್ಣೆ, ಎಲ್ಲಿಕ್ಕೆಯ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಲ್ಲಿಕ್ಕೆಯ ಎಣ್ಣೆ
ಎಲ್ಲಿಕ್ಕೆಯ ಬತ್ತಿ
ಎಲ್ಲಿಕ್ಕೆಯ ಲಿಂಗವ ಪೂಜಿಸುವರು ನೀವು ಕೇಳಿರೆ : ಅಂಗ ಲಿಂಗವೆಂಬೆನೆ ? ಹಿಂಗದು ಮನದ ಭವಿತನ. ಪ್ರಾಣ ಲಿಂಗವೆಂಬೆನೆ ? ಭಾವದಲ್ಲಿ ಜಂಗಮವನರಿಯರು. ಗುರುವಚನ ಸಾರಾಯಸಂಪನ್ನರೆಂಬೆನೆ ? ಷಟ್ಕರ್ಮ (ಷಡಕ್ಷರ?) ಮಂತ್ರ ವಿರೋಧಿಗಳು. ಇದು ಕಾರಣ ಕೂಡಲಚೆನ್ನಸಂಗಯ್ಯಾ ತಾಯ ಮಾರಿ ತೊತ್ತ ಕೊಂಬರನೇನೆಂಬೆ.