ವಿಷಯಕ್ಕೆ ಹೋಗು

ಎಳ್ಳಿಂಗೆ ಪರಿಮಳವ ಕಟ್ಟಿದಲ್ಲದೆ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಎಳ್ಳಿಂಗೆ ಪರಿಮಳವ ಕಟ್ಟಿದಲ್ಲದೆ
ಎಣ್ಣೆಗೆ ಪರಿಮಳ ವೇಧಿಸದು (ಘಟಿಸದು?) ದೇಹದಲ್ಲಿ ಇಷ್ಟಲಿಂಗ ಸ್ಥಾಪಿಸಿದಲ್ಲದೆ ಪ್ರಾಣಲಿಂಗ ಸಂಬಂಧವಾಗದು. ಇದು ಕಾರಣ ನಮ್ಮ ಗುಹೇಶ್ವರಲಿಂಗದಲ್ಲಿ ಇಷ್ಟಲಿಂಗ ಸಂಬಂಧಿಯಾದಲ್ಲದೆ
ಪ್ರಾಣಲಿಂಗ ಸಂಬಂಧಿಯಾಗಬಾರದು
_ ಕಾಣಾ ಸಿದ್ಧರಾಮಯ್ಯಾ.