ಐದಾನೆಯ ಬೆನ್ನಲ್ಲಿ ಐದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಐದಾನೆಯ ಬೆನ್ನಲ್ಲಿ ಐದು ಒಂಟೆ ಹೋದವು
ಒಂಬತ್ತು ಸಾವಿರ ಕುದುರೆಯನು ಒಂದು ಎಳಗ ಎಯ್ದಿಸುತ್ತಿದ್ದಿತ್ತು. ಅರೆಮರುಳಾದವನ ನೆರೆ ಮರುಳಾದವ ಬಲ್ಲನೆ ? ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ
ಇಕ್ಕಿದ ಹಾಲ ಬೆಕ್ಕು ಕುಡಿಯಿತ್ತು
ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ