ಐದ ಕಟ್ಟಿ ಐದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಐದ ಕಟ್ಟಿ ಐದ ನೆಗಪಿ
ಮನಪವನಧ್ಯಾನ ಭಾವ ದೃಢದಿಂದ ಧ್ಯಾನದಿ ನೋಡಿ; ಕಾಯದ ಗಾಳಿಯ ಸಂಚವ ಶೋಧಿಸಿ
ಒಳಗೆ ಜಾರಿದ ಅಮೃತವನು ವಾಯುಮಂಡಲದಲೆತ್ತಿ
ನಾಭಿಮಂಡಲದಲ್ಲಿ ನುಂಗಿ ಮಾಯಾಮಂಡಲ ತೋರಲರಿಯ ಬಲ್ಲಡೆ ಗುಹೇಶ್ವರಲಿಂಗದಲ್ಲಿ ಆತ ಶಿವಯೋಗಿ