ವಿಷಯಕ್ಕೆ ಹೋಗು

ಒಂದಡಕೆಯನಿಟ್ಟರೆ ಅಡ್ಡಗೋಡೆ ಬಸುರಾಯಿತ್ತು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಒಂದಡಕೆಯನಿಟ್ಟರೆ ಅಡ್ಡಗೋಡೆ ಬಸುರಾಯಿತ್ತು
ನಡುಮನೆಯೊಳಗಣ ಕಂಭ ಗಂಡು ಮಗನ ಹಡೆಯಿತ್ತು. ಹೊರಗೆ ಕಿಚ್ಚನಿಕ್ಕಿ ಒಳಗೆ ಅಗ್ನಿ ಪುಟವ ಹಾಕಿ
ಹಾದಿ ಹೋಗೋ ಅಣ್ಣ ನಮ್ಮ ಕರುವ ಕಾಣಲಿಲ್ಲವೆ. ನಿನ್ನೆ ಬಿತ್ತಿದ ಹೊಲದಾಗೆ ಮೊನ್ನೆ ಮೇಯ್ವುದ ಕಂಡೆ. ಕೊರಳ ಕೊಯ್ವುದ ಕಂಡೆ
ರಕ್ತವ ಕಾಣಲಿಲ್ಲ
ಸುಡುವುದ ಕಂಡೆ ಬೂದಿಯ ಕಾಣಲಿಲ್ಲ. ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರಾ