ಒಂದನೆಯ ಬಾಗಿಲಲ್ಲಿ ನೇಹವಿಪ್ಪುದು,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಒಂದನೆಯ ಬಾಗಿಲಲ್ಲಿ ನೇಹವಿಪ್ಪುದು
ಎರಡನೆಯ ಬಾಗಿಲಲ್ಲಿ ಗುಣವಿಪ್ಪುದು
ಮೂರನೆಯ ಬಾಗಿಲಲ್ಲಿ ಧ್ಯಾನವಿಪ್ಪುದು
ನಾಲ್ಕನೆಯ ಬಾಗಿಲಲ್ಲಿ ಯೋಗವಿಪ್ಪುದು
ಐದನೆಯ ಬಾಗಿಲಲ್ಲಿ ಪಂಚೇಂದ್ರಿಯ ಗುಣವಿಪ್ಪುದು
ಆರನೆಯ ಬಾಗಿಲಲ್ಲಿ ಷಡುಸ್ಥಲಂಗಳಿಪ್ಪವು
ಏಳನೆಯ ಬಾಗಿಲಲ್ಲಿ ಸಪ್ತವ್ಯಸನಂಗಳಿಪ್ಪವು
ಎಂಟನೆಯ ಬಾಗಿಲಲ್ಲಿ ಅಷ್ಟಮದಂಗಳಿಪ್ಪವು ಒಂಬತ್ತನೆಯ ಬಾಗಿಲಲ್ಲಿ ನಾದಬಿಂದುಗಳಿಪ್ಪವು
ಹತ್ತನೆಯ ಬಾಗಿಲಲ್ಲಿ ಸುಜ್ಞಾನವಿಪ್ಪುದು
ಇಂತೀ ಒಂಬತ್ತು ಬಾಗಿಲಂ ಕಳೆದು ದಶಮಬಾಗಿಲಂ ತೆಗೆದು ಹೊಕ್ಕು ಮಹಾಸುಖಿಯಾಗಿದ್ದ ಕೂಡಲಚೆನ್ನಸಂಗಾ ನಿಮ್ಮ ಶರಣ.