ಒಂದಾದುದು ಎರಡಪ್ಪುದೆ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದಾದುದು ಎರಡಪ್ಪುದೆ ? ಎರಡಾದುದು ಒಂದಪ್ಪುದೆ_[ಎಂದ]À ಪರಿಣಾಮದ ವೇಳೆಯಲ್ಲಿ ಸಂದೇಹ ಹುಟ್ಟಲುಂಟೆ ? ಬಂದ ಜಂಗಮದ ನಿಲವನರಿಯದೆ
ಹಿಂದನೆಣಿಸಿ ಹಲವ ಹಂಬಲಿಸುವರೆ ? ಈ ಒಂದು ನಿಲವಿಂಗೆ ಪರಿಣಾಮವ ಮಾಡಬಲ್ಲಡೆ ನಿನ್ನ ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮಕ್ಕೆ ಪರಿಣಾಮವಹುದು ನೋಡಾ. ಗುಹೇಶ್ವರನೆಂಬ ಲಿಂಗದ ನಿಲವನರಿಯದೆ ಮರುಳಾದೆಯಲ್ಲಾ ಸಂಗನಬಸವಣ್ಣಾ