ಒಂದು ಪಟ್ಟಣದೊಳಗೆ ಛಪ್ಪನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದು ಪಟ್ಟಣದೊಳಗೆ ಛಪ್ಪನ್ನ ಗೃಹಕ್ಕೆ ಒಂದೆ ಕೀಲಾಗಿ
ಆ ಕೀಲಿನ ಸಕೀಲವನಾರಿಗೂ ಕಾಣಬಾರದೆಂದೂ_ ಭಾವಿಸಿ ಕಂಡರು ಒಂದೆ ಮನದವರು. ಉಳಿದವರೆಲ್ಲ ಆ ಕೀಲಿನೊಳಗಾಗಿ ಜೀವ ಜೀರ್ಣವಾಯಿತ್ತು. ಹದಿನೆಂಟು ಸ್ಥಾನದ ಕೀಲಗಳ ಸಂಗವನಳಿದು
ಸುಸಂಗವಾಗಿ ಶೃಂಗಾರ ಭೃಂಗಾರವಾಗದೆ ಒಂದು ಮುಖದಲ್ಲಿ ನಿಂದು ಗುಹೇಶ್ವರಾ_ನಿಮ್ಮ ಶರಣ ಚನ್ನಬಸವಣ್ಣ ಹೊರಗಾದ !