ಒಂದು ಪದದೊಳಗೆ ಎರಡೆಂಬತ್ತೆಂಟುಕೋಟಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದು ಪದದೊಳಗೆ ಎರಡೆಂಬತ್ತೆಂಟುಕೋಟಿ ಪದ ಹುಟ್ಟಿದವು ನೋಡಾ. ಆ ಎರಡೆಂಬತ್ತೆಂಟು ಕೋಟಿ ಪದದೊಳಗೆ ಅನೇಕ ಕಾಲುಗಳು ಹುಟ್ಟಿದವು ನೋಡಾ. ಆ ಅನೇಕ ಕಾಲುಗಳ ಮುರಿದು
ಎರಡೆಂಬತ್ತುಕೋಟಿ ಪದಗಳನಳಿದು
ಒಂದೆ ಪದದಲಿ ನಿಲಬಲ್ಲರೆ ಆತನು ಪರಶಿವ ಪದಸ್ಥನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ!