ಒಂದು ಮನ; ಆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದು ಮನ; ಆ ಮನದಲ್ಲಿ ಲಿಂಗತ್ರಯವನು ಒಂದೆ ಬಾರಿ [ಗೆ] ನೆನೆವ ಪರಿಯೆಂತೊ ? ಅರಿದರಿದು ಲಿಂಗಜಾಣಿಕೆ ! ಮುಂದ ನೆನೆದಡೆ ಹಿಂದಿಲ್ಲ; ಹಿಂದ ನೆನೆದಡೆ ಮುಂದಿಲ್ಲ. ಒಂದರೊಳಗೆ ಎರಡೆರಡಿಪ್ಪವೆಂದಡೆ
ಅದು ಭಾವಭ್ರಮೆಯಲ್ಲದೆ ಸಹಜವಲ್ಲ. ನಿರುಪಾಧಿಕಲಿಂಗವನುಪಾಧಿಗೆ ತರಬಹುದೆ ? ಸ್ವತಂತ್ರಲಿಂಗವ ಪರತಂತ್ರಕ್ಕೆ ತರಬಹುದೆ ? ಗುಹೇಶ್ವರಾ_ನಿಮ್ಮ ಬೆಡಗು ಬಿನ್ನಾಣವನರಿದೆನಾಗಿ
ಎಂತಿರ್ದುದಂತೆ ಸಂತ !