ಒಂದೊಂದರ ಸಂಬಂಧ ಮತ್ತೊಂದಕ್ಕಳವಡದು. ಕಂದನೊಳಗಣ ಸ್ವಪ್ನ ಮುಂದುದೋರುವುದೇ ? ಚಂದ್ರಕಾಂತಶಿಲೆಯಲ್ಲಿ ರತ್ನವ ಕಂಡೆನೆಂಬ ಅಹಂಕಾರ ನಿನಗೇಕೆ ಶರಣಾ? ಕೈಯ ಕುರುಹಳಿಯದು ಬಾಯ ಮೊರೆ ಮಿಗೆವರಿಯುತ್ತಿದೆ ಕೂಡಲಚೆನ್ನಸಂಗಯ್ಯನಲ್ಲಿ ಬಸವನೂ ಪ್ರಭುವೂ ಇಬ್ಬರೂ ಮರುಳಾದರು.