ಒಡಲುಗೊಂಡು ಹುಟ್ಟಿದ ಘಟ್ಟಕ್ಕೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡಲುಗೊಂಡು ಹುಟ್ಟಿದ ಘಟ್ಟಕ್ಕೆ ಅಷ್ಟೋತ್ತರಶತವ್ಯಾಧಿ. ಅದಕ್ಕೆ ನಾನಾ ಔಷಧಿಯ ತಂದು ಹೊರೆವರು
ಆ ಪರಿಯ ನಾನದ ಹೊರಿಯೆನು. ಅದೇನು ಕಾರಣವೆಂದೆಡೆ : ಭವರೋಗವೈದ್ಯ
ಭವಹರನೆಂಬ ಬಿರಿದು ನಿಮ್ಮದಾಗಿ. ಇದು ಕಾರಣ ಕೂಡಲಸಂಗಮದೇವಾ
ನಿಮ್ಮ ಪುರಾತನರ ಪ್ರಸಾದವಲ್ಲದೆ ಕೊಂಡಡೆ ನಿಮ್ಮಾಣೆ.