ವಿಷಯಕ್ಕೆ ಹೋಗು

ಒಡಲೆಂಬಾರಣ್ಯದ ಪಡುವಣ ಕಾಳುಗಟ್ಟದ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಒಡಲೆಂಬಾರಣ್ಯದ ಪಡುವಣ ಕಾಳುಗಟ್ಟದ ಗಹ್ವರದ ನವದ್ವಾರದೊಳಗೆ ಅಡಗಿಪ್ಪ ಐವರ ಕಳ್ಳರ ತಿಳಿದು ನೋಡಿರಯ್ಯಾ. ಆ ಕಳ್ಳರು ಇಹನ್ನಕ್ಕರ ಊರಿಗುಪಟಳ ಮನೆಗೆ ಮಾರಿ
Zõ್ಞಕ ಗ್ರಾಮದ ಮಧ್ಯದವರಿಗುಳುಹಿಲ್ಲ. ತನುಪ್ರಪಂಚಿಗಳು ಮನಪ್ರಪಂಚಿಗಳು ಧನಪ್ರಪಂಚಿಗಳು ವಾದಿಗಳು ತರ್ಕಿಗಳು ನಾನಾ ಕುಟಿಲ ಕುಹಕ ಬಹುಪಾಪಿಗಳೆಲ್ಲ ನೆರೆದು
ಆ ಕ?್ಳರ ಹಿಡಿದಿಹೆವೆನುತ್ತಿಹರಯ್ಯಾ. ಅದಕ್ಕೆಂಟು ಬೀದಿ ಒಂಬತ್ತು ಓಡುಗಂಡಿ ಕಾಣಬಾರದ ಕತ್ತಲೆ
ಹೆಜ್ಜೆಯ ಹೊಲಬ ಕಂಡೆಹೆನೆಂಬನು ಭ್ರಾಂತ ನೋಡಾ ! ಓಂ ಬ್ರಹ್ಮಸ್ನಾನಂ ಪವನಜ್ಞಾನಂ ಲಿಂಗಧ್ಯಾನಂ ಸುಜ್ಞಾನದರ್ಶನಂ ಪ್ರಭಾಕರಂ ದಿವಾಕರಂ ಇಂತೀ ಶ್ರುತಿಮತದಲ್ಲಿ ತಿಳಿದು ನೋಡಲಿಕೆಯಾಗಿ ಆ ಹೆಜ್ಜೆ ಹೋಯಿತು ! ಅಂಗಸಂಗನ ಹಳ್ಳಿಯ ಒಳಗೆರೆಯ ಒಸರುಬಾವಿಯ ಲಿಂಗಗೂಡಿನ ಶಿವಪುರದ ಸೀಮೆಯ
ನಿಟಿಲಪುರದ ತಲೆವಲದಲ್ಲಿ ಸಿಕ್ಕಿದ ಕ?್ಳರ ಅಂಗದ ಮೇಲೆ ಕಟ್ಟಿತಂದು ಎನ್ನೊಡೆಯ ಪ್ರಭುರಾಯಂಗೊಪ್ಪಿಸಲು ಆ ಪ್ರಭುರಾಯ ತನ್ನವರೆಂದು ಒಕ್ಕುದ ಮಿಕ್ಕುದನಿಕ್ಕಿ ರಕ್ಷಿಸುವ ಕಾಣಿರೆ ! ಇಂತಪ್ಪ ಘಟ ಪಂಚಭೂತಂಗ? ಕಟ್ಟಿ ನಿಲಿಸಿ
ಆತ್ಮಜ್ಞಾನ ಭಕ್ತಿರಸಾಮೃತಸಾರಾಯವನುಣಬಲ್ಲವರಾರೆಂದಡೆ ಪ್ರಭುವಿನ ಬಳಿಯ ಬಸವಸಂತತಿಗಲ್ಲದೆ ಅ?ವಡದು ಮಿಕ್ಕಿನ ಪ್ರಪಂಚಿಗಳಿಗೆ ಅಸಾಧ್ಯ ಕಾಣಾ ಕೂಡಲಚೆನ್ನಸಂಗಮದೇವಯ್ಯಾ.