ಒಡೆಯರಿಗೆ ಒಡವೆಯನೊಪ್ಪಿಸಲಾರದೆ ಮೊರೆುಡುವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡೆಯರಿಗೆ ಒಡವೆಯನೊಪ್ಪಿಸಲಾರದೆ ಮೊರೆುಡುವ ಮನವ ನಾನೇನೆಂಬೆ ನೆತ್ತಿಯಲ್ಲಿ ಆಲಗ ತಿರುಹುವಂತಪ್ಪ ವೇದನೆಯಹುದೆನಗೆ. ಕೊಯ್ದ ಮೂಗಿಂಗೆ ಕನ್ನಡಿಯ ತೋರುವಂತಪ್ಪ ವೇದನೆಯಹುದೆನಗೆ. ಬೆಂದ ಹುಣ್ಣ ಕಂಬಿಯಲ್ಲಿ ಕೀಸುವಂತಪ್ಪ ವೇದನೆಯಹುದೆನಗೆ. ಕೂಡಲಸಂಗಮದೇ[ವಾ] ನೀ ಮಾಡಿ ನೋಡುವ ಹಗರಣವ ನಾ ಮಾಡಿಹೆನೆಂದಡೆ
ಮನಕ್ಕೆ ಮನ ನಾಚದೆ ಅಯ್ಯಾ 304