ಒಬ್ಬಂಗೆ ಇಹವುಂಟು ಒಬ್ಬಂಗೆ ಪರವುಂಟು ಒಬ್ಬಂಗೆ ಇಹವಿಲ್ಲ ಒಬ್ಬಂಗೆ ಪರವಿಲ್ಲ. ಒಬ್ಬಂಗೆ ಇಹಪರವೆರಡೂ ಇಲ್ಲ. ಚೆನ್ನಮಲ್ಲಿಕಾರ್ಜುನದೇವರ ಶರಣರಿಗೆ ಇಹಪರವೆರಡೂ ಉಂಟು.