ಒಬ್ಬರು ಹಿಡಿಯರು. ನಡೆದಾಚರಣೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಬ್ಬರು ನಡೆದಾಚರಣೆಯಲ್ಲಿ ನಡೆಯರು. ಒಬ್ಬರು ಹಿಡಿದ ಶೀಲವ ಹಿಡಿಯರು. ಒಬ್ಬರು ನುಡಿದ ಭಾಷೆಯ ನುಡಿಯರು. ಅದೇನು ಕಾರಣವೆಂದೊಡೆ : ತಮ್ಮ ಲಿಂಗಮಚ್ಚಿ ನಡೆವರು. ತಮ್ಮ ಲಿಂಗಮಚ್ಚಿ ಹಿಡಿವರು. ತಮ್ಮ ಲಿಂಗಮಚ್ಚಿ ನುಡಿವರು. ಇದು ಕಾರಣ. ಅಖಂಡೇಶ್ವರಾ
ನಿಮ್ಮ ಶರಣರು ಪರಮ ಸ್ವತಂತ್ರಶೀಲರು.