ಒಮ್ಮೆ ನೆಲದಲ್ಲಿ ಬಿತ್ತಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಮ್ಮೆ ನೆಲದಲ್ಲಿ ಬಿತ್ತಿದ ಬಿತ್ತುವ ಕಿತ್ತಿ ಕಿತ್ತಿ ಮತ್ತೆ ಬಿತ್ತುತ್ತ ಹೋದಡೆ
ಆ ಬಿತ್ತು ಮೊಳೆತು ಕಳೆಯೇರಿ ಬೆಳೆದು ಬೆಳಸನೀವ ಪರಿಯಿನ್ನೆಂತೊ
ಮರುಳು ಮಾನವಾ ? ಗುರುವಿತ್ತ ಲಿಂಗವ ತೊರೆ ತೊರೆದು ಮರಳಿ ಮರಳಿ ಧರಿಸಿದಡೆ ಆ ಇಷ್ಟಲಿಂಗವು ಅನಿಷ್ಟವ ಕಳೆದು ಇಷ್ಟಾರ್ಥವನೀವ ಪರಿಯಿನ್ನೆಂತೊ ? ಇದು ಕಾರಣ- ಕೂಡಲಚೆನ್ನಸಂಗಯ್ಯನಲ್ಲಿ ಮುಕ್ತಿಯನರಸುವಡೆ ಅಂಗನಲ್ಲಿ ಹೆರೆಹಿಂಗದೆ ಲಿಂಗವ ಧರಿಸಬೇಕು