ವಿಷಯಕ್ಕೆ ಹೋಗು

ಒಲೆ ಹತ್ತಿ ಉರಿದಡೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ ನಿಲಲುಬಾರದು. ಏರಿ ನೀರುಂಬಡೆ
ಬೇಲಿ ಕೆಯ್ಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯ ಮೊಲೆವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ ! 26