ಒಲ್ಲೆನೆಂಬುದು ವೈರಾಗ್ಯ, ಒಲಿವೆನೆಂಬುದು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಒಲ್ಲೆನೆಂಬುದು ವೈರಾಗ್ಯ
ಒಲಿವೆನೆಂಬುದು ಕಾಯಗುಣ. ಆವ ಪದಾರ್ಥವಾದಡೇನು ತನ್ನಿದ್ದೆಡೆಗೆ ಬಂದುದ ಲಿಂಗಾರ್ಪಿತವ ಮಾಡಿ ಭೋಗಿಸುವುದೆ ಆಚಾರ. ಕೂಡಲಸಂಗಮದೇವರನೊಲಿಸ ಬಂದ ಪ್ರಸಾದಕಾಯವ ಕೆಡಿಸಲಾಗದು.