ಒಳಗೆ ಕುಟಿಲ, ಹೊರಗೆ
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಒಳಗೆ ಕುಟಿಲ
ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು
ಅವರು ಪಥಕ್ಕೆ ಸಲ್ಲರು ಸಲ್ಲರಯ್ಯಾ. ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ. 96