ಒಳಗ ತೊಳೆದು ಜಲವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಳಗ ತೊಳೆದು ಜಲವ ತುಂಬಲರಿಯದ ಅರೆಮರುಳನೇನಾದ ಹೇಳಿರೆ ? ಜಲದ ಸಂಗವ ತೊರೆಯಲರಿಯದೆ ಜಲವ ಬಯಸುವನೆಂತಿರ್ದ ಹೇಳಿರೆ ? ನೆಲನ ಶೋಧಿಸಿ ನೆಲೆಯನರಿಯದೆ
ಕೆರೆಯ ಕಟ್ಟಿಸುವ ಒಡ್ಡ ರಾಮನ ಇರವೆಂತು ಹೇಳಿರೆ ? ನಮ್ಮ ಗುಹೇಶ್ವರನ ನಿಲವನರಿಯದ ಮರುಳ ಸಿದ್ಧರಾಮನೆಂತಿರ್ದಹ ಹೇಳಿರೆ ?