ಒಳಗ ಶೋಧಿಸಿ ಹೊರಗ
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಒಳಗ ಶೋಧಿಸಿ ಹೊರಗ ಶುದ್ಧಯಿಸಿ; ಒಳಹೊರಗೆಂಬ ಉಭಯ ಶಂಕೆಯ ಕಳೆದು
ಸ್ಫಟಿಕದ ಶಲಾಕೆಯಂತೆ ತಳವೆಳಗು ಮಾಡಿ ಸುಕ್ಷೇತ್ರವನರಿದು ಬೀಜವ ಬಿತ್ತುವಂತೆ- ಶಿಷ್ಯನ ಸರ್ವ ಪ್ರಪಂಚ ನಿವೃತ್ತಿಯಂ ಮಾಡಿ ನಿಜೋಪದೇಶವನಿತ್ತು
ಆ ಶಿಷ್ಯನ ನಿಜದಾದಿಯನೈದಿಸುವನೀಗ ಜ್ಞಾನಗುರು. ಆ ಸಹಜ ಗುರುವೀಗ ಜಗದಾರಾಧ್ಯನು
ಅವನ ಶ್ರೀಪಾದಕ್ಕೆ ನಮೋ ನಮೋ ಎಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ.