Library-logo-blue-outline.png
View-refresh.svg
Transclusion_Status_Detection_Tool

ಓಂಕಾರವೇ ನಾದಮಯ. ಓಂಕಾರವೇ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಓಂಕಾರವೇ ನಾದಮಯ. ಓಂಕಾರವೇ ಮಂತ್ರಮಯ. ಓಂಕಾರವೇ ಪರಿಪೂರ್ಣವಾಗಿ ಸರ್ವವ್ಯಾಪಕತ್ವವನ್ನುಳ್ಳುದು ನೋಡಾ. ಪ್ರಣವವೇ ಪರಮಾತ್ಮ ಸ್ವರೂಪವಾಗಿ ಪರಮೇಶ್ವರನ ಗೌಪ್ಯಮುಖ ನೋಡಾ. ಪ್ರಣವವೆ ಶಿವಶರಣರ ಹೃದಯಾದ್ಥಿಪತಿ ಇದು ಕಾರಣ
ಹೃದಯಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವಧ್ಯಾನದಲ್ಲಿ ತರಹರವಾಗಿ ಪ್ರಣವಸ್ವರೂಪನಾಗಿದ್ದೆನಯ್ಯ. ಪಂಚಾಕ್ಷರವೆ ಪಂಚಬ್ರಹ್ಮಮಯವಾಗಿ ಆ ಪಂಚಾಕ್ಷರಿಮಂತ್ರವೆ ಶರೀರವಾಗಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.