ವಿಷಯಕ್ಕೆ ಹೋಗು

ಓಂ ನಮಃ ಶಿವಾಯ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ವೇದ
ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ಶಾಸ್ತ್ರ
ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ತರ್ಕ. ಭಯಂಕರ ಭ್ರಮೆಗೊಂಡಿತ್ತು ಮಂತ್ರ-ತಂತ್ರ
ಶಿವನಂತುವನರಿಯದೆ ಚಿಂತಿಸುತ್ತಿದ್ದಿತ್ತು ಲೋಕ
ಕೂಡಲಸಂಗಮದೇವ ಶ್ವಪಚನ ಮೆರೆದಡೆ ಜಾತಿಭೇದವ ಮಾಡಲಮ್ಮವು.