Library-logo-blue-outline.png
View-refresh.svg
Transclusion_Status_Detection_Tool

ಓಹೋ ನಮಃ ಶಿವಾಯ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಓಹೋ ನಮಃ ಶಿವಾಯ
_ ಮಹದಾಕಾಶದ ಮರೆಯಲ್ಲಿರ್ದ ಶಾಂತ್ಯರ್ಕನ ನಿಲವೊ ! ದಶಮರುತನ ಹೊಯಿಲಿಲ್ಲದೆ
ತಾನೆ ಲಿಂಗದ ಜ್ಞಾನಜ್ಯೋತಿಯ ನಿಲವೊ ! ತನ್ನಿಂದ ತಾನಾಗಿ ಮುಕ್ತಿಯೆ ಕರಿಗೊಂಡ ಮುಕ್ತಿಯ ಮುತ್ತಿನ ಧವಳಕಾಂತಿಯ ನಿಲವೊ ! ರುದ್ರಾಕ್ಷಿಯ ಹಂಗು ಬೇಡವೆಂದು ಹೊದ್ದ ಚರ್ಮದ ಹೊದಿಕೆಯಂ ತೆಗೆದ ಗಿಟಿ ಗಿಟಿ ಜಂತ್ರದ ನಿಲವೊ ! ಅಲ್ಲ
ತನ್ನ ನಿಲವನರಿಯದೆ ವಾದಿಸುತ್ತಿರಲು ಉರಿಲಿಂಗೋದ್ಭವವಾದ ಉರಿಲಿಂಗದ ನಿಲವೋ ! ಆವ ನಿಲವೆಂದರಿಯಬಾರದು ! ಗುಹೇಶ್ವರನ ಕಂಗಳಿಗೆ ಒಂದಾಶ್ಚರ್ಯ ತೋರಿತ್ತು ಕಾಣಾ ಸಂಗನಬಸವಣ್ಣಾ !