ವಿಷಯಕ್ಕೆ ಹೋಗು

ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕಡೆಂತಹುದಯ್ಯಾ ? ಬೆಟ್ಟದ ತುದಿಯ ಮೆಟ್ಟಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಹುದಯ್ಯಾ ? ನೀನಿಕ್ಕಿದ ಸಯದಾನವನೊಲ್ಲದೆ ಬೇರೆ ಬಯಸಿದೊಡೆಂತಹುದಯ್ಯಾ ? ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು ಕಿರುಕುಳಕ್ಕೆ ಸಂದಡೆಂತಹುದಯ್ಯಾ ? ಕತ್ತಲೆಯ ಹೊಕ್ಕಡೆಂತಹುದಯ್ಯಾ ?