ಕಂಗಳೇಕೆ `ನೋಡಬೇಡಾ' ಎಂದರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಂಗಳೇಕೆ `ನೋಡಬೇಡಾ' ಎಂದರೆ ಮಾಣವು ? ಶ್ರೋತ್ರಂಗಳೇಕೆ `ಆಲಿಸಬೇಡಾ' ಎಂದರೆ ಮಾಣವು ? ಜಿಹ್ವೆ ಏಕೆ `ರುಚಿಸಬೇಡಾ' ಎಂದರೆ ಮಾಣವು (ದು ?) ನಾಸಿಕವೇಕೆ `ವಾಸಿಸಬೇಡಾ' ಎಂದರೆ ಮಾಣವು ? (ದು ?) ತ್ವಕ್ಕು ಏಕೆ `ಸೋಂಕಬೇಡಾ' ಎಂದರೆ ಮಾಣವು ? (ದು ?)_ ಈ ಭೇದವನರಿದು ನುಡಿಯಲು ಸಮಧಾತುವಾಯಿತ್ತು! ಗುಹೇಶ್ವರಲಿಂಗಕ್ಕೆ ಒಲಿದ ಕಾರಣ
ಅಭಿಮಾನ ಲಜ್ಜೆ ಬೇಸತ್ತು ಹೋಯಿತ್ತು.