ವಿಷಯಕ್ಕೆ ಹೋಗು

ಕಂಡೆಯಾ ಬಸವಣ್ಣಾ, ಕಣ್ಣಿನೊಳಗಣ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕಂಡೆಯಾ ಬಸವಣ್ಣಾ
ಕಣ್ಣಿನೊಳಗಣ ಬೊಂಬೆಯ ಸೂತ್ರದ ಇರವಿನಂತೆ
ಕುಂದಣದೊಳಗಡೆಗೆ ತೋರುವ ಮೃದು ಛಾಯದಂತೆ
ನವನೀತದೊಳಗಡಗಿದ ಸಾರದ ಸವಿಯಂತೆ ಅಂಗವಿಲ್ಲದ ಕುರುಹು
ಭಾವವಿಲ್ಲದ ಬಯಲು
ಬೆಳಗನರಿಯದ ಜ್ಯೋತಿಯ ಕಂಡೆಯಾ ಸಂಗನಬಸವಣ್ಣಾ
ಗುಹೇಶ್ವರಲಿಂಗದಲ್ಲಿ ಮರುಳು ಶಂಕರದೇವರ ?