ಕಟಿಹಾದ ಬಿದಿರಿನಲ್ಲಿ ಮರಳಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ ? ೆಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ ? ತೊಟ್ಟ ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ ? ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದಡೆ
ನಿಷ್ಠೆಯುಳ್ಳ ಶರಣರು ಮರಳಿ ಮರ್ತ್ಯಕ್ಕೆ ಬಪ್ಪರೆ ಚೆನ್ನಮಲ್ಲಿಕಾರ್ಜುನಾ ?