ಕಟ್ಟಿದಾತ ಭಕ್ತನಪ್ಪನೆ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಟ್ಟಿದಾತ ಭಕ್ತನಪ್ಪನೆ ? ಕೆಡಹಿದಾತ ದ್ರೋಹಿಯಪ್ಪನೆ ? ಲಿಂಗವ ಕಟ್ಟಲಿಕ್ಕೆ ತನ್ನ ಕೈಯೊಳಗಿಪ್ಪುದೆ ? ಕೆಡಹಲಿಕ್ಕೆ ಬೀಳಬಲ್ಲುದೆ ? ಆ ಲಿಂಗವು ಬಿದ್ದ ಬಳಿಕ ಜಗವು ತಾಳಬಲ್ಲುದೆ ? ಪ್ರಾಣಲಿಂಗ ಬಿದ್ದ ಬಳಿಕ ಆ ಪ್ರಾಣ ಉಳಿಯಬಲ್ಲುದೆ ? ಲಿಂಗ ಬಿದ್ದಿತ್ತೆಂಬುದು ಸೂತಕದ ಶಬ್ದ
ಭ್ರಾಂತುವಿನ ಪುಂಜ. ಅಂತು ಅದ ಕೇಳಲಾಗದು. ಯುಗಜುಗಂಗಳು ಗತವಹವಲ್ಲದೆ ಲಿಂಗಕ್ಕೆ ಗತವುಂಟೆ ? ಲಿಂಗವು ಬಿದ್ದಿತ್ತೆಂದು ನಿಂದಿಸಿ ನುಡಿವ ದ್ರೋಹಿಯ ಮಾತ ಕೇಳಲಾಗದು ಕಾಣಾ ಗುಹೇಶ್ವರಾ.