ಕಡೆಯಿಲ್ಲದ ದೇಶವ ತಿರುಗಿದೆನು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಡೆಯಿಲ್ಲದ ದೇಶವ ತಿರುಗಿದೆನು
ಹವಣಿಲ್ಲದ ಕಂಥೆಯ ತೊಟ್ಟೆನು
ಹಸಿವಿಲ್ಲದ ಕಪ್ಪರವ ಹಿಡಿದು ಭಕ್ತಿಭಿಕ್ಷವ ಬೇಡ ಬಂದೆನು. ಗುಹೇಶ್ವರ ಹಸಿದನು
ಉಣಲಿಕ್ಕು ಏಳಾ ಸಂಗನಬಸವಣ್ಣಾ.