ವಿಷಯಕ್ಕೆ ಹೋಗು

ಕಣ್ಗೆ ಕಾಬಡೆ ರೂಪಲ್ಲ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕಣ್ಗೆ ಕಾಬಡೆ ರೂಪಲ್ಲ
ಕೈಗೆ ಸಿಲುಕವಡೆ ದೇಹಿಯಲ್ಲ. ನಡೆವಡೆ ಗಮನಿಯಲ್ಲ
ನುಡಿವಡೆ ವಾಚಾಳನಲ್ಲ. ನಿಂದಿಸಿದಡೆ ಹಗೆಯಲ್ಲ
ಹೊಗಳಿದವರಿಗೆ ಕೆಳೆಯಲ್ಲ. ಗುಹೇಶ್ವರನ ನಿಲುವು ಮಾತಿನ ಮಾಲೆಗೆ ಸಿಲುಕುವುದೆ ? ಸಿದ್ಧರಾಮಯ್ಯ ನೀನು ಮರುಳಾದೆಯಲ್ಲಾ