ಕಣ್ಣಿಂಗೆ ಕಣ್ಣು, ಕಣ್ಣೊಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಣ್ಣಿಂಗೆ ಕಣ್ಣು
ಕಣ್ಣೊಳು ಕಣ್ಣು
ಕಣ್ಣೇ ನೇತ್ರ
ನೇತ್ರವೆ ಸೂತ್ರ
ಸೂತ್ರವೆ ಲಿಂಗ
ಲಿಂಗವೆ ಗುಹ್ಯ. ಗುಹ್ಯಕ್ಕೆ ಗುಹ್ಯ
ಗೋಪ್ಯಕ್ಕೆ ಗೋಪ್ಯ
ರಹಸ್ಯಕ್ಕೆ ರಹಸ್ಯ. ಈ ನೇತ್ರಮಹಿಮೆಯ ಗುಹೇಶ್ವರ ಬಲ್ಲನಲ್ಲದೆ ಕಣ್ಣುಗೆಟ್ಟಣ್ಣಗಳೆತ್ತ ಬಲ್ಲರು ನೋಡಯ್ಯ.