ಕಣ್ಣೆ ಕಟ್ಟಿಗೆಯಾಗಿ, ಕೈಯೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಣ್ಣೆ ಕಟ್ಟಿಗೆಯಾಗಿ
ಕೈಯೆ ಕರ್ಪರವಾಗಿ
ಕಿವಿಯೆ ಸಕಲಪುರಾತನರ ಕಾರುಣ್ಯವೆನುತ
ಮನದ ಭಿಕ್ಷವನುಂಡು
ತನು ಪರಿಣಾಮವನೆಯ್ದಿಹ ಘನಮಹಿಮರ ತೋರಯ್ಯಾ ಗುಹೇಶ್ವರಾ