ವಿಷಯಕ್ಕೆ ಹೋಗು

ಕಣ್ಣೊಳಗೆ ಕಣ್ಣಿದ್ದು ಕಾಣಲೇಕರಿಯರಯ್ಯಾ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಣ್ಣೊಳಗೆ ಕಣ್ಣಿದ್ದು ಕಾಣಲೇಕರಿಯರಯ್ಯಾ ಕಿವಿಯೊಳಗೆ ಕಿವಿಯಿದ್ದು ಕೇಳಲೇಕರಿಯರಯ್ಯಾ ಘ್ರಾಣದೊಳಗೆ ಘ್ರಾಣವಿದ್ದು ವಾಸಿಸಲೇಕರಿಯರಯ್ಯಾ ಜಿಹ್ವೆಯೊಳಗೆ ಜಿಹ್ವೆಯಿದ್ದು ರುಚಿಸಲೇಕರಿಯರಯ್ಯಾ ಸ್ಪರ್ಶನದೊಳಗೆ ಸ್ಪರ್ಶನವಿದ್ದು ಮುಟ್ಟಲೇಕರಿಯರಯ್ಯಾ ಪ್ರಾಣದೊಳಗೆ ಪ್ರಾಣವಿದ್ದು ನೆನೆಯಲೇಕರಿಯರಯ್ಯಾ ಕಾಯದೊಳಗೆ ಕಾಯವಿದ್ದು ಬಿಡದು
ಬೇರಾಗದು. ಕೂಡಲಸಂಗಮದೇವಾ
ನೀನಿಕ್ಕಿದ ಅಣಕದ ಭೇದವ ಭೇದಿಸಬಾರದಯ್ಯಾ.