ಕದಳಿ ಎಂಬುದು ತನು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕದಳಿ ಎಂಬುದು ತನು
ಕದಳಿ ಎಂಬುದು ಮನ
ಕದಳಿ ಎಂಬುದು ವಿಷಯಂಗಳು. ಕದಳಿ ಎಂಬುದು ಭವಘೋರಾರಣ್ಯ. ಈ ಕದಳಿ ಎಂಬುದ ಗೆದ್ದು ತವೆ ಬದುಕಿ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು. ಭವ ಗೆದ್ದು ಬಂದ ಮಗಳೆ ಎಂದು ಕರುಣದಿ ತೆಗೆದು ಬಿಗಿಯಪ್ಪಿದಡೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು.