ಕನಕಾಚಲದಲ್ಲಿ ದಿನನಾಯಕ ಎಂಬ ರತ್ನ ಹುಟ್ಟಿ ಅಹುದಲ್ಲ (ಅಹುದು ಅಲ್ಲ?) ಎಂಬ ಕೊಳಗದ ಕೊರಳಿನಲ್ಲಿ ಅಳೆವುತ್ತೈದಾನೆ. ಕೊಳಗದ ಕೊರಳು ತುಂಬಿ ಅಳೆವಾತನ ಹೃದಯ ತುಂಬಿ ಗುಹೇಶ್ವರಲಿಂಗದ ಕಂಗಳು ತುಂಬಿ ಮಂಗಳಮಯವಾಯಿತ್ತು !