ವಿಷಯಕ್ಕೆ ಹೋಗು

ಕರಿಯು ಸ್ಪರ್ಶನೇಂದ್ರಿಯದಿಂದ ಬಂಧನವಡೆದಳಿಯಿತ್ತು.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕರಿಯು ಸ್ಪರ್ಶನೇಂದ್ರಿಯದಿಂದ ಬಂಧನವಡೆದಳಿಯಿತ್ತು. ಪತಂಗನು ರೂಪೇಂದ್ರಿಯದಿಂದ ಬಂಧನವಡೆದಳಿಯಿತ್ತು. ಭೃಂಗನು ಗಂಧೇಂದ್ರಿಯದಿಂದ ಬಂಧನವಡೆದಳಿಯಿತ್ತು. ಕುರಂಗನು ಶಬ್ದೇಂದ್ರಿಯದಿಂದ ಬಂಧನವಡೆದಳಿಯಿತ್ತು. ಮತ್ಸ್ಯವು ರಸನೇಂದ್ರಿಯದಿಂದ ಬಂಧನವಡೆದಳಿಯಿತ್ತು._ ಇಂತೀ; ಒಂದೊಂದು ಇಂದ್ರಿಯೋದ್ರೇಕದಿಂದ ಒಂದೊಂದು ಪ್ರಾಣಿಯು ಪ್ರಳಯವಾಯಿತ್ತು. ಪಂಚೇಂದ್ರಿಯಂಗಳ
ಒಂದು ಘಟದಲ್ಲಿ ತಾಳಿಹ ಮನುಷ್ಯ ಪ್ರಾಣಿಗಳಿಗೆ
ಮರವೆ ಎಡೆಗೊಂಡು ದೇಹಮೋಹಭ್ರಾಂತು ಮುಸುಕಿ ಮಾಯೆಯ ಬಾಯ ತುತ್ತಹುದು ಚೋದ್ಯವೇನು ಹೇಳಾ ಗುಹೇಶ್ವರಾ ?