Library-logo-blue-outline.png
View-refresh.svg
Transclusion_Status_Detection_Tool

ಕರ್ತನನರಿಯದವನು ವಿಪ್ರನಾದಡೇನು !

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಕರ್ತನನರಿಯದವನು ವಿಪ್ರನಾದಡೇನು ! ಚತುರ್ವೇದಿಯಾದಡೇನು ಭುಕ್ತಿಕಾರಣ ಲೋಕದ ಇಚ್ಛೆಗೆ ನುಡಿದು ನಡೆವರಯ್ಯಾ ! ಭವಿಮಾಡಿದ ಪಾಕವ ತಂದು
ಲಿಂಗಕ್ಕರ್ಪಿಸುವ ಕಷ್ಟರ ಕಂಡು ನಾಚಿತ್ತೆನ್ನ ಮನವು
ಕೂಡಲಸಂಗನ ಶರಣರ ಒಕ್ಕುದ ಕೊಂಡು ಅನ್ಯವನಾಚರಿಸಿದಡೆ ತಪ್ಪದು ಸೂಕರ ಶುಚಿರ್ಭೂತತೆಯ ಪ್ರಾಣಿಯಂತೆ.