ಕರ್ಮದ ಕಟ್ಟನೆ ಕೊಯ್ದು ಬ್ರಹ್ಮದ್ವಾರವ ಕಂಡೆ ಮೇಲೊಂದು ಕಂಬವ ಕಂಡೆನಲ್ಲಾ ! ಕಂಬವ ಖಂಡಣೆಯ ಮಾಡಿ ಮಹಾಬೆಳಗನೆ ಕಂಡೆ ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದನು.