ಕರ್ಮವೆ ಪ್ರಾಣವೆಂದು ಮಾಡುವಾಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕರ್ಮವೆ ಪ್ರಾಣವೆಂದು ಮಾಡುವಾಗ ಜ್ಞಾನವನರಿವ ನೆಲೆ ಶುದ್ಧವಿನ್ನಾವುದು ? ಸಾವನ್ನಕ್ಕ ಸಾಧನೆಯ ಮಾಡಿ ಕಾದವಾಠಾವಿನ್ನಾವುದು ? ಅರಿದುದ ನೇತಿಗಳೆದು; ಮೇಲರಿದುದ ಕರಿಗೊಳುತ್ತ ತುಷವ ನೀಗಿದ ತಂಡುಲದಂತೆ ಕಾಯದ ದೆಸೆ ಶುದ್ಧವಾಗಿರಬೇಕು
ಸಿದ್ಧರಾಮಯ್ಯಾ ಗುಹೇಶ್ವರಲಿಂಗವನರಿವುದಕ್ಕೆ.