ಕರ್ಮಿ ಬಲ್ಲನೆ ಭಕ್ತಿಯ ಮರ್ಮವ
ಚರ್ಮವ ತಿಂಬ ಸೊಣಗಬಲ್ಲುದೆ ಪಾಯಸದ ಸವಿಯ? ಉಚ್ಚಿಯ ಬಚ್ಚಲ ಮಚ್ಚಿ ಕಚ್ಚಿ ಕಡಿದಾಡುವ ಮರುಳುಮಾನವರು ನಿಶ್ಚಿಂತ ನಿರಾಳನಿಗೊಲಿದು ಒಚ್ಚತ ಹೋಗಿ ಅಪ್ಪಿ ಅಗಲದಿಪ್ಪ ಅನುಪಮಸುಖನಿವರೆತ್ತ ಬಲ್ಲರು? ಸಂಸಾರವೆಂಬ ಸೊಕ್ಕು ತಲೆಗೇರಿ ಮುಂದುಗಾಣದೆ ಅಕಟಕಟಾ ಕೆಟ್ಟಿತ್ತು ನೋಡ ತ್ರೆ ೈಜಗವೆಲ್ಲ. ಸ್ವರ್ಗ ಮತ್ರ್ಯ ಪಾತಾಳಕ್ಕೆ ಪಶುಪತಿ ಏಕೋದೇವನೆಂದು ಅರಿದು ಸಂಸಾರಪ್ರಪಂಚ ಮರೆಯಾ ಮರುಳೇ. ಪರಮಸುಖದೊಳಗಿರ್ದು ಅಲ್ಪಸುಖಕ್ಕೆ ಆಸೆಮಾಡುವ ಅಜ್ಞಾನಿಗಳನೇನೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ?